ಟಿಇಟಿ ಶಿಕ್ಷಕರ ನೇಮಕಾತಿ ಹಿನ್ನೆಲೆ ಪರೀಕ್ಷೆ: ಆನ್ ಲೈನ್ ಯಡವಟ್ಟಿನಿಂದ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳು
ಚಿಕ್ಕಮಗಳೂರು: ಆನ್ ಲೈನ್ ನಲ್ಲಿ ಎರಡು ಬಾರಿ ಪ್ರತ್ಯೇಕ ಪರೀಕ್ಷೆ ಸೆಂಟರ್ ತೋರಿಸಿದ್ದರಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾದ ಘಟನೆ ನಡೆದಿದೆ.
ಚಿಕ್ಕಮಗಳೂರು ನಗರದ ಹಲವು ಸೆಂಟರ್ ಗಳಲ್ಲಿ ನಡೆಯುತ್ತಿರುವ ಟಿಇಟಿ ಶಿಕ್ಷಕರ ನೇಮಕಾತಿ ಹಿನ್ನೆಲೆ ಪರೀಕ್ಷೆ ನಡೆಯುತ್ತಿದೆ. ಬಳ್ಳಾರಿಯಿಂದ ಬಂದಿದ್ದ ಅಭ್ಯರ್ಥಿಗಳಿಗೆ ಎರಡು ಬಾರಿ ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ಆನ್ ಲೈನ್ ನಲ್ಲಿ ಸೂಚಿಸಲಾಗಿದೆ.
ಒಂದು ಪರೀಕ್ಷಾ ಕೇಂದ್ರ ಹೋದಾಗ ಅಲ್ಲಿ ಮತ್ತೊಂದು ಪರೀಕ್ಷಾ ಸೆಂಟರ್ ತೋರಿಸಿದೆ. ಹೀಗಾಗಿ ಬಸವನಹಳ್ಳಿ ಶಾಲೆ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಆಗಮಿಸಿದ್ದು, ಈ ವೇಳೆ ಸಿಬ್ಬಂದಿ ಇಲ್ಲದ ಸಬೂಬು ನೀಡಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ದೂರದ ಬಳ್ಳಾರಿಯಿಂದ ಚಿಕ್ಕಮಗಳೂರಿನ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಆಗಮಿಸಿದ್ದರು. ಆದರೆ ಆನ್ ಲೈನ್ ಎಡವಟ್ಟಿನಿಂದಾಗಿ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗುವಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka