ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.
ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ. ಈ ಕಾಯ್ದೆಯ ಪರವಾಗಿ ನಾಲ್ವರು ನ್ಯಾಯಾಧೀಶರು ವಾದಿಸಿದರೆ, ಮತ್ತೊರ್ವರು ವಿರುದ್ಧವಾಗಿ ವಾದಿಸಿದ್ದಾರೆ.
ತೀರ್ಪನ್ನು ಓದಿದ ನ್ಯಾಯಾಧೀಶ ಮಹೇಶ್ವರಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವುದರಿಂದ ಸಂವಿಧಾನದ ಮೂಲ ರಚನೆ ಉಲ್ಲಂಘಿಸುವುದಿಲ್ಲ ಎಂದರು.
ನ್ಯಾಯಾಧೀಶರಾದ ಎಸ್. ರವೀಂದ್ರ ಭಟ್ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ರಷ್ಟು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಬಡವರನ್ನು ಇದರಿಂದ ಹೊರಗಿಡುವುದು ತಾರತಮ್ಯವಾಗುತ್ತದೆ ಎಂದು ವಾದಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka