ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆಯ ಬೆನ್ನಲ್ಲೇ ಪೊಲೀಸ್ ದಂಪತಿ ನೇಣುಬಿಗಿದು ಆತ್ಮಹತ್ಯೆ - Mahanayaka
1:15 AM Wednesday 11 - December 2024

ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆಯ ಬೆನ್ನಲ್ಲೇ ಪೊಲೀಸ್ ದಂಪತಿ ನೇಣುಬಿಗಿದು ಆತ್ಮಹತ್ಯೆ

18/12/2020

ಬೆಂಗಳೂರು:  ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಂಪತಿ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ.  ಪತಿ ಸುರೇಶ್ ಎಸಿಪಿ ಕಚೇರಿಯಲ್ಲಿ ರೈಟರ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದರು.  ಶೀಲಾ ಕಂಟ್ರೋಲ್ ರೂಮ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಸುರೇಶ್ ಅವರು ಎಸಿಪಿ ಕಚೇರಿಯಲ್ಲಿ ನಡೆದ ಮೀಟಿಂಗ್ ನಲ್ಲಿ ಭಾಗವಹಿಸಿದ್ದು, ಲವಲವಿಕೆಯಿಂದಿದ್ದರು.  ಆದರೆ ಬೆಳ್ಳಂಬೆಳಗ್ಗೆ ಅವರು ತಮ್ಮ ಪತ್ನಿಯ ಜೊತೆ ಆತ್ಮಹತ್ಯೆಗೆ ಶರಣಾಗಿರುವುದು ಸಿಬ್ಬಂದಿಗೆ ಆಘಾತವಾಗಿದೆ.

ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇನ್ನಿಬ್ಬರು ಆತ್ಮಹತ್ಯೆಗೆ ಶರಣಾಗಿರುವುದು. ಪೊಲೀಸ್ ಇಲಾಖೆಗೆ ಆಘಾತವನ್ನು ತಂದಿದ್ದು, ದಂಪತಿಗಳ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ