ಯುವಕನನ್ನು ಕೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಅರೆಸ್ಟ್
ವಿಟ್ಲ: ಯುವಕನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೊಳಂತರೂ ನಿವಾಸಿ, ಆಟೋ ರಿಕ್ಷಾ ಚಾಲಕ ಅದ್ದು ಯಾನೆ ಅದ್ರಾಮ ಎಂದು ಪೊಲೀಸರು ತಿಳಿಸಿದ್ದಾರೆ.
ಸುರಿಬೈಲ್ ನಿವಾಸಿ, ಸುಮಾರು 19 ವರ್ಷ ಪ್ರಾಯದ ಸಮದ್ ಯಾನೆ ಚಪ್ಪಿ ಎಂಬ ಯುವಕನನ್ನು ಇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಮೃತದೇಹವನ್ನು ಸುಟ್ಟು ಹಾಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ರವಿವಾರ ನಡೆದಿದ್ದು, ಇಂದು ಬೆಳಗ್ಗೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಮದ್ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಈತ ಆರೋಪಿಯ ಜೊತೆಯಲ್ಲೇ ಇರುತ್ತಿದ್ದ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka