ಹಾಲ್ ಟಿಕೆಟ್ ನಲ್ಲಿ ಅಭ್ಯರ್ಥಿಯ ಚಿತ್ರ ಬದಲು ಸನ್ನಿಲಿಯೋನ್ ಅಶ್ಲೀಲ ಚಿತ್ರ! - Mahanayaka
10:03 PM Friday 13 - December 2024

ಹಾಲ್ ಟಿಕೆಟ್ ನಲ್ಲಿ ಅಭ್ಯರ್ಥಿಯ ಚಿತ್ರ ಬದಲು ಸನ್ನಿಲಿಯೋನ್ ಅಶ್ಲೀಲ ಚಿತ್ರ!

sunny leone
09/11/2022

ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ  ಅಶ್ಲೀಲ ಚಿತ್ರವಿರುವ ಹಾಲ್ ಟಿಕೆಟ್ ನ್ನು ಮಹಿಳೆಗೆ ನೀಡಲಾಗಿದ್ದು, ಬಾಲಿವುಡ್ ನಟಿ ಸನ್ನಿ ಲಿಯೊನ್ ಅವರ ಅಶ್ಲೀಲ ಚಿತ್ರ ತನ್ನ ಹಾಲ್ ಟಿಕೆಟ್ ನಲ್ಲಿರುವುದು ಕಂಡು ಪರೀಕ್ಷೆ ಬರೆಯಲು ಬಂದ ಮಹಿಳಾ ಅಭ್ಯರ್ಥಿ ಬೆಚ್ಚಿ ಬಿದ್ದಿದ್ದಾರೆ.

ಈ ಹಾಲ್ ಟಿಕೆಟ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ನೇಮಕಾತಿಯ ಪ್ರವೇಶಾತಿ ಪತ್ರದಲ್ಲಿ ಅಭ್ಯರ್ಥಿಯ ಬದಲು ನೀಲಿಚಿತ್ರ ತಾರೆಯ ಫೋಟೋ ಪ್ರಕಟಿಸಲಾಗಿದೆ. ಸದನದಲ್ಲಿ ನೀಲಿಚಿತ್ರ ವೀಕ್ಷಿಸುವ ಪಕ್ಷದವರಿಂದ ಇನ್ನೇನು ತಾನೇ ನಿರೀಕ್ಷಿಸಲು ಸಾಧ್ಯ? @BCNagesh_bjp ಅವರೇ, ನೀಲಿಚಿತ್ರ ತಾರೆ ನೋಡುವ ಹಂಬಲವಿದ್ದರೆ ಒಂದು ಫೋಟೋ ನೇತಾಕಿಕೊಳ್ಳಿ, ಅದಕ್ಕೆ ಶಿಕ್ಷಣ ಇಲಾಖೆಯನ್ನು ಉಪಯೋಗಿಸಬೇಡಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಣ ಸಚಿವರನ್ನು ಹಾಗೂ ಶಿಕ್ಷಣ ಇಲಾಖೆಯನ್ನು ತರಾಟೆಗೆತ್ತಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ