ಜಿಲ್ಲಾಡಳಿತ ಅಳವಡಿಸಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ: ಇಬ್ಬರು ಯುವಕರ ಬಂಧನ
ಮಂಗಳೂರಿನ ಸೋಮೇಶ್ವರದಲ್ಲಿ ಜಿಲ್ಲಾಡಳಿತದ ನಿರ್ದೇಶನ ಮೇರೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲಿ ಮರಳು ಸಾಗಾಟ ಮಾಡುವ ಉದ್ದೇಶದಿಂದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ್ದರು.
ಅಕ್ರಮ ಮರಳು ಸಾಗಾಟ ತಡೆಯುವುದಕ್ಕಾಗಿ ದ.ಕ. ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿ ಕ್ಯಾಮರಾ ಅಳವಡಿಸಿತ್ತು.
ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಲಾರಿಯಿಂದ ಡಿಕ್ಕಿ ಹೊಡೆದು ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka