ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ವ್ಯಕ್ತಿ!
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ನೆಲಮಂಗಲ ನಿವಾಸಿ ಉಮೇಶ (55) ಎಂಬವರಾಗಿದ್ದಾರೆ. ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತದೇಹದಲ್ಲಿ ಪತ್ತೆಯಾದ ಚೀಟಿಯಲ್ಲಿ ಬರೆದಿದ್ದ ದೂರವಾಣಿ ಸಂಖ್ಯೆಗೆ ಕರೆಮಾಡಿದಾಗ ಇವರ ಬಗ್ಗೆ ಮಾಹಿತಿ ತಿಳಿದು ಬಂದಿದ್ದು ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka