ಗಾಂಧಿ ಕುಟುಂಬದ ಕ್ಷಮೆಯಾಚಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವರಾದ ನಳಿನಿ ಶ್ರೀಹರನ್ ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ.
ಸ್ಫೋಟದಲ್ಲಿ ಸಾವನ್ನಪ್ಪಿದವರ ಹಾಗೂ ಗಾಂಧಿ ಕುಟುಂಬದ ಕ್ಷಮೆಯಾಚಿಸಿರುವ ನಳಿನಿ, ಸ್ಫೋಟದಲ್ಲಿ ಸಾವನ್ನಪ್ಪಿದವರ ಬಗ್ಗೆ ತಂಬಾ ವಿಷಾದವಿದೆ. ಈ ಘಟನೆಗಳ ಬಗ್ಗೆ ಯೋಚಿಸುತ್ತಾ ಹಲವು ವರ್ಷಗಳನ್ನು ಕಳೆದಿದ್ದೇವೆ ಎಂದು ಹೇಳಿದ್ದಾರೆ.
ರಾಜೀವ್ ಗಾಂಧಿ ಕುಟುಂಬವನ್ನು ನೀವು ಭೇಟಿಯಾಗುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಳಿನಿ, ಅವರು ನನ್ನನ್ನು ಭೇಟಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರು ನನ್ನನ್ನು ನೋಡುವ ಸಮಯ ಕಳೆದಿದೆ ಎಂದು ಭಾವಿಸುತ್ತೇನೆ ಎಂದು ಉತ್ತರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka