ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂದು ಟವರ್ ಹತ್ತಿ ಬೆದರಿಸಿದ AAP ಮುಖಂಡ!
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡನೊಬ್ಬ ಚುನಾವಣೆಗೆ ಟಿಕೆಟ್ ಸಿಗಲಿಲ್ಲ ಎಂಬ ದುಃಖದಲ್ಲಿ ಟೆಲಿಫೋನ್ ಟವರ್ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯಲ್ಲಿ ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಪೂರ್ವ ದೆಹಲಿಯ ಮಾಜಿ ಕೌನ್ಸಿಲರ್ ಹಸೀಬ್—ಉಲ್ ಹಸನ್ ಟವರ್ ಈ ವಿಪರೀತ ವರ್ತನೆ ತೋರಿದವರಾಗಿದ್ದಾರೆ.
ಟವರ್ ಏರಿ ಕುಳಿತ ಹಸೀಬ್ ಫೇಸ್ ಬುಕ್ ಲೈವ್ ಮಾಡಿದ್ದು, ತನಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕರಾದ ಅತಿಶಿ ಹಾಗೂ ದುರ್ಗೇಶ್ ಎಂಬವರಿಂದಾಗಿ ತನಗೆ ಟಿಕೆಟ್ ಸಿಕ್ಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಬ್ಯಾಂಕ್ ಪಾಸ್‍ಬುಕ್ ಸೇರಿದಂತೆ ಅನೇಕ ದಾಖಲೆಯನ್ನು ಅವರೇ ಇಟ್ಟುಕೊಂಡಿದ್ದಾರೆ. ಆದರೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. ಆದರೆ ನನಗೆ ಅದ್ಯಾವ ದಾಖಲೆಯನ್ನು ಅ ಅತಿಶಿ ಹಾಗೂ ದುರ್ಗೇಶ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka