ಸಾಲದಿಂದ ಬೇಸತ್ತು ರಬ್ಬರ್ ತೋಟದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
16/11/2022
ಬೆಳ್ತಂಗಡಿ: ನೆರಿಯ ಗ್ತಾಮದ ಗಂಡಿಬಾಗಿಲು ನಿವಾಸಿ ಡೋಮಿನಿಕ್(50) ಮನೆಯ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಭವಿಸಿದೆ.
ಕೃಷಿಕರಾಗಿದ್ದ ಇವರು ಒಂದಿಷ್ಟು ಸಾಲದ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಮನೆಯ ಸಮೀಪವಿರುವ ರಬ್ಬರ್ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka