ಭಯೋತ್ಪಾದನೆಯನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು: ಅಮಿತ್ ಶಾ ಹೇಳಿಕೆ
ನವದೆಹಲಿ: ಭಯೋತ್ಪಾದನೆ ಅಥವಾ ಭಯೋತ್ಪಾದನಾ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತು ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಹಾಗೂ ಜನಾಂಗದ ಗುಂಪಿಗೆ ಹೋಲಿಸಬಾರದು ಎಂದು ಹೇಳಿದರು.
ಭಯೋತ್ಪಾದನೆ ಚಟುವಟಿಕೆಗಳು ವಿಶ್ವದ ಶಾಂತಿಗೆ ಭಂಗ ತರುತ್ತದೆ. ಇಂತಹ ಚಟುವಟಿಕೆಗಳಿಗೆ ನಿಧಿ ಹರಿದು ಬರುತ್ತಿರುವುದಿಂದ, ಈ ಚಟುವಟಿಕೆಗಳ ಪೋಷಣೆಯಾಗುತ್ತಿದೆ. ಈ ಬೆಳವಣಿಗೆ ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಎಚ್ಚರಿಸಿದರು.
ಭಾರತವು ಭಯೋತ್ಪಾದನೆ ನಿಗ್ರಹಿಸಲು ಆರ್ಥಿಕ ವ್ಯವಸ್ಥೆ ಮತ್ತು ಕಾನೂನು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿದೆ ಎಂದು ಅವರು ಶ್ಲಾಘಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka