ಧರ್ಮಸ್ಥಳ: ಲಕ್ಷದೀಪೋತ್ಸವ ಪ್ರಯುಕ್ತ 10ನೇ ವರ್ಷದ ಪಾದಯಾತ್ರೆಗೆ ಭವ್ಯ ಸ್ವಾಗತ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಹತ್ತನೆ ವರ್ಷದ ಪಾದಯಾತ್ರೆಗೆ ಧರ್ಮಸ್ಥಳದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಧರ್ಮಸ್ಥಳ ಮುಖ್ಯದ್ವಾರದ ಸಮೀಪ ಡಿ.ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಸ್ವಾಗತಿಸಲಾಯಿತು.
ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.
ಪಾದಯಾತ್ರೆಯ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಹರೀಶ್ ಕುಮಾರ್ , ಪ್ರತಾಪ ಸಿಂಹ ನಾಯಕ್, ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್.ಮಂಜುನಾಥ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಶ್ರೀನಾಥ್, ಬೆಸ್ಟ್ ಪೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಸಿರಿ ನಿರ್ದೇಶಕ ಜನಾರ್ಧನ್ ಪೂರನ್ ವರ್ಮ, ವಸಂತ ಸಾಲಿಯಾನ್, ಪಿತಾಂಬರ ಹೆರಾಜೆ, ರಾಜಶೇಖರ ಅಜ್ರಿ ಹಾಗೂ ತಾಲೂಕಿನ ಹಾಗೂ ಹೊರ ತಾಲೂಕುಗಳಿಂದ ಆಗಮಿಸಿದ್ದ ಸಹಸ್ರಾರು ಮಂದಿ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಆಗಮಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka