ಭೀಕರ ಅಪಘಾತ: 7 ಮಕ್ಕಳ ಸಹಿತ 15 ಮಂದಿಯ ದಾರುಣ ಸಾವು
ಪಾಟ್ನ: ಬಿಹಾರದ ವೈಶಾಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಕ್ಕಳ ಸಹಿತ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ.
ರಸ್ತೆ ಬದಿಯ ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.
ಭೂಯಾನ್ ಬಾಬಾರವರ ಪೂಜೆ ಹಿನ್ನೆಲೆ ಔತಣಕೂಟ ಮುಗಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಈ ವೇಳೆ ಪೀಪಲ್ ಟ್ರೀ ಬಳಿ ನಿಂತಿದ್ದ ಜನರ ಮೇಲೆ ಟ್ರಕ್ ಹರಿದಿದೆ. ಟ್ರಕ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka