ಹಲ್ಲೆ ನಡೆದ ಗ್ರಾಮಕ್ಕೆ ನೂರಾರು ಬೆಂಬಲಿಗರೊಂದಿಗೆ ಎಂಟ್ರಿ ಕೊಟ್ಟ ಶಾಸಕ ಎಂ.ಪಿ.ಕುಮಾರಸ್ವಾಮಿ
ಕೊಟ್ಟಿಗೆಹಾರ: ಹುಲ್ಲೆಮನೆ ಗ್ರಾಮದಲ್ಲಿ ನಿನ್ನೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಗ್ರಾಮಸ್ಥರು ಅಟ್ಟಾಡಿಸಿದ್ದರು. ಇಂದು ಬೆಳಗ್ಗೆ ಅದೇ ಪ್ರದೇಶಕ್ಕೆ ತನ್ನ ನೂರಾರು ಬೆಂಬಲಿಗರೊಂದಿಗೆ ಶಾಸಕರು ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.
ಕಾಡಾನೆ ತುಳಿತಕ್ಕೆ ಬಲಿಯಾದ ಮಹಿಳೆಯ ಅಂತ್ಯಸಂಸ್ಕಾರದಲ್ಲಿ ಶಾಸಕರು ಭಾಗಿಯಾದರು. ಇದೇ ವೇಳೆ ಶಾಸಕರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ವಿರುದ್ಧ ಯಾವುದೇ ದೂರುಗಳನ್ನು ದಾಖಲಿಸದಂತೆ ಶಾಸಕರಿಗೆ ಗ್ರಾಮದ ಮುಖಂಡರೊಬ್ಬರು ಮನವಿ ಮಾಡಿಕೊಂಡರು.
ಈ ವೇಳೆ ಶಾಸಕರು ಹಾಗೂ ಪೊಲೀಸರು ಅಧಿಕಾರಿಗಳು, ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸವನ್ನು ಯಾರೂ ಕೂಡ ಮಾಡಬಾರದು ಎಂಬ ಎಚ್ಚರಿಕೆಯನ್ನು ನೀಡಿದರು.
ಆನೆಯನ್ನು ಹಿಡಿಯುವ ನಿಟ್ಟಿನಲ್ಲಿ ಸರ್ಕಾರದ ನೀತಿ ನಿಯಮಗಳಡಿಯಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಆದರೆ ನಿನ್ನೆಯ ದಿನ ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಯಾವ ರೀತಿಯಲ್ಲಿ ವರ್ತಿಸಿದ್ದಾರೆ ಅನ್ನೋದು ಎಲ್ಲರ ಮೊಬೈಲ್ ಗಳಲ್ಲಿಯೂ ಓಡಾಡುತ್ತಿದೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ನಿನ್ನೆ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಗ್ರಾಮಸ್ಥರು, ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕ್ಷಮೆಯಾಚಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka