ಧರ್ಮಸ್ಥಳ: 26 ಕೋಟಿ ವೆಚ್ಚದ ನೂತನ ಯೋಜನೆಗೆ ಸಚಿವ ಬೈರತಿ ಬಸವರಾಜು ಶಿಲಾನ್ಯಾಸ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಧರ್ಮಸ್ಥಳ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ 26 ಕೋಟಿ ವೆಚ್ಚದ ನೂತನ ಯೋಜನೆಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜು ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನೂತನ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಧರ್ಮಸ್ಥಳಕ್ಕೆ ಬರುವ ಯಾತ್ರಿಕರಿಗೆ ನೀರಿನ ತೊಂದರೆಯಾಗದಂತೆ ಈ ಮೂಲಕ ವ್ಯವಸ್ಥೆ ಮಾಡಲಾಗುವುದು ಎಂದರು. ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಡ್ರೈನೇಜ್ ವ್ಯವಸ್ಥೆ ಹಾಗೂ ನೀರು ಶುದ್ದೀಕರಣ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯರು ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸುರಪುರ ಶಾಸಕ ನರಸಿಂಹ ನಾಯಕ್ ರಾಜೂಗೌಡ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿಧಾನ ಸಭಾಸದಸ್ಯ ಪ್ರತಾಪ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಡಿ.ಹರ್ಷೇಂದ್ರ ಕುಮಾರ್ , ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka