ವಿದ್ಯಾರ್ಥಿನಿಯರ ಶೌಚಾಲಯಕ್ಕೆ ರಹಸ್ಯ ಕ್ಯಾಮರಾ ಇಡುತ್ತಿದ್ದ ವೇಳೆ ಸಿಕ್ಕಿ ಬಿದ್ದ ವಿದ್ಯಾರ್ಥಿ
ಬೆಂಗಳೂರು: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಅಳವಡಿಸುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಶುಭಂ ಎಂ. ಆಜಾದ್ ಬಂಧಿತ ವಿದ್ಯಾರ್ಥಿಯಾಗಿದ್ದಾನೆ. ಆರೋಪಿಯು ಬಿಬಿಎ 5ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದಾನೆ.
ಈತನ ಮೊಬೈಲ್ ನಲ್ಲಿ ಸುಮಾರು 1,200 ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಇನ್ನೂ ಸ್ನೇಹಿತೆಯರ ಜೊತೆಗಿದ್ದ ವೇಳೆ ಅವರ ಅರೆ ನಗ್ನ ಚಿತ್ರವನ್ನೂ ಈತ ತೆಗೆದಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ.
ಈತ ಈ ಹಿಂದೆ ಕಾಲೇಜು ಶೌಚಾಲಯಕ್ಕೆ ಕ್ಯಾಮೆರಾ ಅಳವಡಿಸಲು ತೆರಳಿದ್ದ ವೇಳೆ ವಿದ್ಯಾರ್ಥಿನಿಯರು ಕಿರುಚಿಕೊಂಡಿದ್ದರು. ಆ ಬಳಿಕ ಕ್ಷಮೆ ಕೇಳಿದ್ದ ಎನ್ನಲಾಗಿದೆ. ಆದರೆ ಈ ಬಾರಿ ಕಾಲೇಜು ಆಡಳಿತ ಮಂಡಳಿ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಇನ್ನೂ ಆರೋಪಿಯ ಬಳಿಯಲ್ಲಿ ಮತ್ತೊಂದು ಮೊಬೈಲ್ ಫೋನ್ ಇತ್ತು ಎಂದೂ ಹೇಳಲಾಗುತ್ತಿದೆ. ಈ ಫೋನ್ ನಲ್ಲಿ ಕೂಡ ವಿಡಿಯೋಗಳು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka