ಬಿಲ್ಲವ ಸಮುದಾಯಕ್ಕೆ ರಾಜ್ಯ ಸರಕಾರದಿಂದ ನಿರಂತರ ಅನ್ಯಾಯ: ಪ್ರಣವಾನಂದ ಸ್ವಾಮೀಜಿ
ರಾಜ್ಯದಲ್ಲಿ 70 ಲಕ್ಷದಷ್ಟಿರುವ ಬಿಲ್ಲವ ಸಮುದಾಯಕ್ಕೆ ರಾಜ್ಯ ಸರಕಾರದಿಂದ ನಿರಂತರ ಅನ್ಯಾಯ ಆಗುತ್ತಿದೆ. ಹಿಂದುಳಿದ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಮುಖ್ಯಮಂತ್ರಿಗಳು ನೇರವಾಗಿ ಮಾಡುತ್ತಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ವಾಗ್ದಾಳಿ ನಡೆಸಿದರು.
ಉಡುಪಿಯ ಬ್ರಹ್ಮಗಿರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ಲವರ ಕುಲಕಸುಬು ಆಗಿರುವ ಶೇಂದಿ ಇಳಿಸುವುದಕ್ಕೆ ನಿಷೇಧ ಹೇರಿ 18 ವರ್ಷ ಆಗಿದೆ. ಅಭಿವೃದ್ಧಿ ನಿಗಮದ ಬದಲು ಜೀವ ಇಲ್ಲದ ಕೋಶ ನೀಡಿ ಮೂಗಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಬಿಲ್ಲವರ ಸಮುದಾಯದ ಮೀಸಲಾತಿ ಹೆಚ್ಚಿಸದೆ, 2 ಎ ಪ್ರವರ್ಗಕ್ಕೆ ದೊಡ್ಡ ಸಮುದಾಯವನ್ನು ಸೇರಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಸಮುದಾಯದ ಯುವಕರನ್ನು ಹಲ್ಲೆ ಗಲಾಟೆ ಮಾಡಲು ಬಳಸಿಕೊಂಡು, ಸಮುದಾಯವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಇನ್ಮುಂದೆ ಇಂತಹ ಆಟ ನಡೆಯುವುದಿಲ್ಲ ಎಂದು ಕಿಡಿಕಾರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka