ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಸಚಿವ ವಿ.ಸುನೀಲ್ ಕುಮಾರ್ ಪ್ರತಿಕ್ರಿಯೆ
ಮಂಗಳೂರಲ್ಲಿ ಕುಕ್ಕರ್ ಸ್ಫೋಟಗೊಂಡ ಸ್ಥಳಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭೇಟಿ ನೀಡಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಈ ಘಟನೆ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆಹಚ್ಚಲು ಹಾಗೂ ಇದರ ಆಳ ಮತ್ತು ಅಗಲವನ್ನು ಅರಿತು, ಈ ಪ್ರಕರಣವನ್ನು ಸಂಪೂರ್ಣವಾಗಿ ಭೇದಿಸುವ ಉದ್ದೇಶದಿಂದ ಇದರ ತನಿಖೆಯನ್ನು ರಾಷ್ಟ್ರೀಯ ತನಿಖೆ ಸಂಸ್ಥೆಗೆ ಹಸ್ತಾಂತರ ಮಾಡಲಾಗಿದೆ’ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka