ಮಣಿಪಾಲ: ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ನಿಂದಿಸಿದ ಪ್ರಾಧ್ಯಾಪಕ ಅಮಾನತು
ಮಣಿಪಾಲ: ತರಗತಿ ನಡೆಯುತ್ತಿರುವ ಸಂದರ್ಭದಲ್ಲೇ ಸಹಾಯಕ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ನಿಂದಿಸಿರುವ ಘಟನೆ ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ನಡೆದಿದೆ.
ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿಯ ಕ್ಷಮೆ ಕೇಳಿದ್ದಾನೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಇದರಿಂದ ತಕ್ಷಣ ಎಚ್ಚೆತ್ತ ಮಾಹೆ ಆಡಳಿತ ಮಂಡಳಿ ಪ್ರಾಧ್ಯಾಪಕನನ್ನು ಅಮಾನತು ಮಾಡಿ ಆಂತರಿಕ ತನಿಖೆಗೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಪ್ರಾಧ್ಯಾಪಕ ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಭಯೋತ್ಪಾದಕರು ಎಂಬ ಅರ್ಥದಲ್ಲಿ ಮಾತನಾಡಿದ್ದರು ಎನ್ನಲಾಗಿದೆ. ಅವರ ಮಾತಿನಿಂದ ಆಕ್ರೋಶಗೊಂಡ ವಿದ್ಯಾರ್ಥಿ, ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕರೆಯಬೇಡಿ. ಅನಗತ್ಯ ತಮಾಷೆಯಾಗಿಯೂ ಈ ರೀತಿ ಮಾತನಾಡಬೇಡಿ ಎಂದು ಹೇಳಿದ್ದಾನೆ. ಆಗ ತನ್ನ ತಪ್ಪಿನ ಅರಿವಾಗಿ ಪ್ರಾಧ್ಯಾಪಕ ವಿದ್ಯಾರ್ಥಿಯ ಕ್ಷಮೆ ಕೇಳಿದ್ದಾರೆ. ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಮತ್ತೆ ಆಕ್ಷೇಪ ಮಾಡಿದ್ದಾನೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕ ವಿರುದ್ಧ ಕ್ರಮ ಜರುಗಿಸಲಾಗಿದ್ದು, ಕೆಲಸದಿಂದ ಅಮಾನತುಗೊಲಿಸಿ ಅಂತರಿಕ ತನಿಖೆಗೆ ಮಾಹೆ ವಿವಿ ಒಳಪಡಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka