‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ‘ಅಸಭ್ಯ’ ಚಿತ್ರ ಎಂದ IFFI ಚಿತ್ರೋತ್ಸವದ ತೀರ್ಪುಗಾರ
ಬಲಪಂಥೀಯ ವಿಚಾರ ಧಾರೆಯ ಏಕಪಕ್ಷೀಯ ಚಿತ್ರ ಅನ್ನೋ ವಿವಾದಕ್ಕೆ ಕಾರಣವಾಗಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ 53 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ನೀಡಿರುವ ಹೇಳಿಕೆಯು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರ ಒಂದು ಅಸಭ್ಯ ಚಿತ್ರ ಎಂದು ಕರೆದಿರುವ ಅವರು, ಸ್ಪರ್ಧಾತ್ಮಕ ವಿಭಾಗಕ್ಕೆ ಇದು ಸೂಕ್ತವಲ್ಲ ಇದೊಂದು ಪ್ರಚಾರಕ ಚಲನಚಿತ್ರದಂತೆ ನಮಗೆ ತೋರುತ್ತಿದೆ ಎಂದಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಚಿತ್ರವನ್ನು ಬಿಜೆಪಿ ದೇಶಾದ್ಯಂತ ಪ್ರಚಾರ ಮಾಡಿತ್ತು. ತೆರಿಗೆ ಮುಕ್ತವಾಗಿ ಈ ಚಿತ್ರವನ್ನು ಪ್ರಕಟಿಸುವ ಮೂಲಕ ಭಾರೀ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿತ್ತು. ಆದರೆ ಈ ಚಿತ್ರದ ಬಗ್ಗೆ ಇದೀಗ ತೀರ್ಪುಗಾರ ನಡಾವ್ ಲ್ಯಾಪಿಡ್ ವ್ಯಕ್ತಪಡಿಸಿರುವ ಅಭಿಪ್ರಾಯ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.
ಈ ಚಿತ್ರವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೇ ಹೊಗಳಿದ್ದರು. ನಿರ್ದೇಶಕರ ಪ್ರಯತ್ನವನ್ನು ಪ್ರಶಂಸಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka