ಅಕ್ಕ IAS ಅಕಾಡೆಮಿ: ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಮೈಸೂರು: ಅಕ್ಕ IAS ಅಕಾಡೆಮಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಪ್ರೊ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮವು ನವೆಂಬರ್ 30ರಂದು ಅಕ್ಕ ಐಎಎಸ್ ಅಕಾಡೆಮಿ ಮೈಸೂರಿನಲ್ಲಿ ನಡೆಯಲಿದೆ.
ಮಧ್ಯಾಹ್ನ 2:30ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಐಎಎಸ್, ಕೆಎಎಸ್ ತರಬೇತುದಾರರಾದ ಗುರುಶಂಕರ್, ಅಸಿಸ್ಟೆಂಟ್ ಡೈರೆಕ್ಟರ್ ಆಫ್ ಕೋ ಆಮರೇಟಿವ್ ಆಡಿಟ್ ಶಿಲ್ಪಾ ಹೆಚ್.ಆರ್. ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಕ ಐಎಎಸ್ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ಡಾ.ಶಿವಕುಮಾರ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಜಾನಪದ ಕಲಾವಿದರಾದ ವಿಶ್ವನಾಥ್ ಎಲ್. ಚಂಗಚಹಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka