ಮದುವೆ ಸಮಾರಂಭದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು
ವಾರಣಾಸಿ: ಮದುವೆ ಸಮಾರಂಭದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನವೆಂಬರ್ 25ರಂದು ನಡೆದಿದೆ.
ಮನೋಜ್ ವಿಶ್ವಕರ್ಮ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಪಿಲ್ಪಾನಿ ಕತ್ರಾ ಬಳಿ ಮದುವೆ ಸಮಾರಂಭದಲ್ಲಿ ಕುಟುಂಬಸ್ಥರೊಂದಿಗೆ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಕಳೆದ ತಿಂಗಳು ಕೂಡ ಇಂತಹದ್ದೇ ಒಂದು ಘಟನೆ ನಡೆದಿತ್ತು. 51 ವರ್ಷದ ವ್ಯಕ್ತಿಯೊಬ್ಬರು ದಾಹೋದ್ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು.
ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಯಾಕೆ ಮೌನವಹಿಸಿದೆ ಅನ್ನೋ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರವಿಲ್ಲದಂತಾಗಿದೆ. ಸಣ್ಣ ವಯಸ್ಸಿನಲ್ಲೇ ಯುವಕರು ಹೃದಯಾಘಾತಕ್ಕೊಳಗಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka