ಭಟ್ಕಳ ತಂಝೀಮ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇನಾಯತುಲ್ಲಾ ಶಾಬಂದ್ರಿರವರ ಸನ್ಮಾನ - Mahanayaka
5:06 PM Thursday 12 - December 2024

ಭಟ್ಕಳ ತಂಝೀಮ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇನಾಯತುಲ್ಲಾ ಶಾಬಂದ್ರಿರವರ ಸನ್ಮಾನ

01/12/2022

ಸಮಾಜ ಸೇವಕ, ರಾಜಕೀಯ ನೇತಾರ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ನಮ್ಮ ನಾಡ ಒಕ್ಕೂಟ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ರವರನ್ನು ಭಟ್ಕಳದ ಪುರಾತನ ಮತ್ತು ಕೇಂದ್ರ ಸಂಸ್ಥೆ “ಮಜ್ಲಿಸ್ ಎ ಇಸ್ಲಾಹ್ ವ ತಂಝೀಮ್”ನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ನಾಡ ಒಕ್ಕೂಟದ ವತಿಯಿಂದ ಕುಂದಾಪುರದ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಡಾ. ರಿಝ್ವಾನ್ ಅಹ್ಮದ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹುಸೇನ್ ಕಾರ್ಕಳ, ಕೋಶಾಧಿಕಾರಿ ಅಬ್ದುಲ್ ಹಮೀದ್ ಮೂಡಬಿದ್ರೆ, ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಉಡುಪಿ ಜಿಲ್ಲಾಧ್ಯಕ್ಷರಾದ ಮುಷ್ತಾಕ್ ಅಹ್ಮದ್ ಬೆಳ್ವೆ, ಉಪಾಧ್ಯಕ್ಷರಾದ ಮುಜಾವರ್ ಅಬು ಮುಹಮ್ಮದ್ ಕುಂದಾಪುರ, ಪ್ರಧಾನ ಕಾರ್ಯದರ್ಶಿ ಮೌ. ಝಮೀರ್ ಅಹ್ಮದ್ ರಶಾದಿ, ಕೋಶಾಧಿಕಾರಿ ಸಯ್ಯದ್ ಅಜ್ಮಲ್ ಶಿರೂರು ಹಾಗೂ ಇತರರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ