ಚುನಾವಣೆಗೆ ಸ್ಪರ್ಧಿಸಲು ಅಭಿಮಾನಿಗಳಿಂದ ಒತ್ತಡ: ಜಯಪ್ರಕಾಶ್ ಹೆಗ್ಡೆ
ಉಡುಪಿ: ನನ್ನ ಅಭಿಮಾನಿಗಳು ಮತ್ತೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಪಕ್ಷ ಬಯಸಿದರೇ ರಾಜ್ಯ ಹಿಂ.ವ.ಗಳ ಆಯೋಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದರು.
2023ರ ನವೆಂಬರ್ ವರೆಗೆ ಹಿಂ.ವರ್ಗದ ಆಯೋಗದ ಅಧಿಕಾರಾವಧಿ ಇದೆ. ಈ ಹುದ್ದೆಯಲ್ಲಿ ತನಗೆ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಸಾಧ್ಯವಾಗಿದೆ. ಈಗಲೂ ಜನರು ಅನೇಕ ಕೆಲಸಗಳಿಗೆ ತಮ್ಮ ಬಳಿಗೆ ಬರುತ್ತಾರೆ. ಚುನಾಯಿತ ಪ್ರತಿನಿಧಿಯಾದರೇ ನೇರವಾಗಿ ಜನರ ಕೆಲಸ ಮಾಡಿ ಕೊಡುವುದಕ್ಕೆ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಬೇರೆ ಪಕ್ಷ ಸೇರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇತರೆ ರಾಜಕೀಯ ಪಕ್ಷಗಳಿಂದಲೂ ಆಮಂತ್ರಣ ಇದೆ. ಆದರೇ ಇನ್ನು ಬೇರೆ ಪಕ್ಷ ಸೇರುವ ಇಚ್ಛೆ ಇಲ್ಲ. ಹಿಂದೆ ಪಕ್ಷೇತರನಾಗಿಯೂ ಸ್ಪರ್ಧಿಸಿ ಗೆದ್ದಿದ್ದೇನೆ, ಆದರೇ ಈಗ ಪಕ್ಷೇತರನಾಗಿ ಸ್ಪರ್ಧಿಸುವ ಕಾಲ ಮುಗಿದಿದೆ. ಚುನಾವಣೆ ಬಹಳ ದುಬಾರಿಯಾಗಿದೆ ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka