ಮಿಯ್ಯಾರು: ಹಾಡಹಗಲೇ ಮನೆಯ ಬಾಗಿಲು ಮುರಿದು ಚಿನ್ನಾಭರಣಕ್ಕಾಗಿ ಜಾಲಾಡಿದ ಕಳ್ಳರು
ಕಾರ್ಕಳ: ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ನುಗ್ಗಿದ ಕಳ್ಳರು ಮನೆಯನ್ನು ಜಾಲಾಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಸಮೀಪದ ಕಳತ್ರಪಾದೆ ಬಳಿ ನಡೆದಿದೆ.
ಗೋಪಾಲ ಪಾಂಡಿಬೆಟ್ಟ ಎಂಬವರ ಮನೆಯ ಬಾಗಿಲು ಮುರಿದು ನುಗ್ಗಿದ ಕಳ್ಳರು, ಕಳವು ಮಾಡಲು ಮನೆಯಲ್ಲಿ ಚಿನ್ನಾಭರಣ, ಹಣಕ್ಕಾಗಿ ಜಾಲಾಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಈ ಸಂಬಂಧ ಮನೆಯವರು ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಿಯ್ಯಾರಿನಲ್ಲಿ ಇದು ಎರಡನೇ ಪ್ರಕರಣ:
ಮಿಯ್ಯಾರಿನಲ್ಲಿ ಇದು ಎರಡನೇ ಪ್ರಕರಣವಾಗಿದ್ದು, ಪೊಲೀಸರು ರೌಂಡ್ಸ್ ಗೆ ಬಾರದೇ ಇರುವುದು, ಕಳ್ಳರಿಗೆ ಲಾಭವಾಗುತ್ತಿದೆ. ಮಿಯ್ಯಾರು ರೆಂಜಾಳ ಕಳತ್ರಪಾದೆಯಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಕಳ್ಳರ ಬಂಧನಕ್ಕೆ ಮುಂದಾಗಬೇಕು ಎಂದು ಇಲ್ಲಿನ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಿಯ್ಯಾರು ಭಾಗದಲ್ಲಿ ಸೇಲ್ಸ್ ಮ್ಯಾನ್ ಗಳು ಗುಜಿರಿ ಮಾರಾಟ, ಹಾಗೂ ಆಶ್ರಮಗಳಿಗೆ ದಾನ ಕೇಳಿಕೊಂಡು ಬರುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಈ ರೀತಿಯಾಗಿ ಬಂದು ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವುದು ಸ್ಥಳೀಯರು ಸಂಶಯವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka