ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ: ಉಡುಪಿ ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆ
ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿ.18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶದ ಕುರಿತು ಉಡುಪಿ ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಮಾತನಾಡಿ ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಡಿ.18ರಂದು ನಡೆಯುವ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶವು ಅತ್ಯಂತ ಮಹತ್ವಪೂರ್ಣವಾಗಿದ್ದು ಜಿಲ್ಲೆಯ ಎಲ್ಲಾ 22 ಪ್ರಕೋಷ್ಠಗಳ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಸಮಿತಿ ಸದಸ್ಯರು ಗರಿಷ್ಠ ಸಂಖ್ಯೆಯಲ್ಲಿ ಅಪೇಕ್ಷಿತರಾಗಿ ಭಾಗವಹಿಸುವ ಮೂಲಕ ಸಮಾವೇಶದ ಯಶಸ್ಸಿಗೆ ಕೈಜೋಡಿಸಬೇಕು ಎಂದರು.
ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿಲ್ಲೇಶ್ ಶೆಟ್ಟಿ ಮಾತನಾಡಿ ಉಡುಪಿ ಜಿಲ್ಲಾ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಬೂತ್ ಮಟ್ಟದಲ್ಲಿ ನಡೆಯಲಿರುವ ಫಲಾನುಭವಿಗಳ ಸಭೆ ಸಹಿತ ಬೂತ್ ಸಮಿತಿ ಸಮಾವೇಶಕ್ಕೆ ಈ ಮಾಹಿತಿ ಪೂರಕವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಅವಿನಾಶ್ ಶೆಟ್ಟಿಗಾರ್ ಹಾಗೂ ವಿವಿಧ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕರು, ಜಿಲ್ಲಾ ಸಹ ಸಂಚಾಲಕರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka