ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ 10 ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ - Mahanayaka
4:02 PM Wednesday 11 - December 2024

ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ 10 ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ

sudhakar k
05/12/2022

ಬೆಂಗಳೂರು : ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ ರಾಜ್ಯದ ಜೆಇ ಎಂಡೆಮಿಕ್ ಪೀಡಿತ ಎಂದು ಗುರುತಿಸಿರುವ 10 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ