‘ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ಮಾಯ ಎಂದಿದ್ದ ‘ಪಾನಕ ರವಿ’ ಕಾಂಗ್ರೆಸ್ ನಿಂದ ಅಮಾನತು!
‘ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ಸುದ್ಧಿಯಾಗಿದ್ದ ಮಂಗಳೂರು ನಗರದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ‘ಪಾನಕ ರವಿ’ ಎಂದೇ ಹೆಸರಾದ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಆದೇಶ ಹೊರಡಿಸಿದೆ.
ಉಳ್ಳಾಲ ನಗರಸಭೆ ಸದಸ್ಯರಾಗಿರುವ ರವಿಚಂದ್ರ ಗಟ್ಟಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪಾನಮತ್ತರಾಗಿ ಮೈಮೇಲಿನ ಬಟ್ಟೆಗಳನ್ನು ಕಳಚಿ ಬಿದ್ದುಕೊಂಡು ಸಾರ್ವಜನಿಕವಾಗಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುತ್ತಾರೆ. ಮೊನ್ನೆ ನಡೆದ ಉಳ್ಳಾಲ ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆಯಂದೂ ಸಭೆಯಲ್ಲಿ ಭಾಗವಹಿಸದೆ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಉಲ್ಲಂಘಿಸಿರುತ್ತೀರಿ. ಆದುದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನುತಗೊಳಿಸಲಾಗುತ್ತಿದೆ ಎಂದು ಬ್ಲಾಕ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka