ಆನೆಗೆ ಕಬ್ಬು ನೀಡಿ 75 ಸಾವಿರ ದಂಡ ಹಾಕಿಸಿಕೊಂಡ ಲಾರಿ ಚಾಲಕ
ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರು ಬಂದ ಗಜರಾಜನಿಗೆ ಕಬ್ಬು ಕೊಟ್ಟ ಲಾರಿ ಚಾಲಕನಿಗೆ ತಮಿಳುನಾಡು ಪೊಲೀಸರು ಬರೋಬ್ಬರಿ 75 ಸಾವಿರ ರೂ. ದಂಡ ಹಾಕಿರುವ ಘಟನೆ ಭಾನುವಾರ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಸಿದ್ಷರಾಜು ಎಂಬಾತನಿಗೆ ದಂಡ ಹಾಕಿಸಿಕೊಂಡ ಚಾಲಕ. ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಆಸನೂರು ಸಮೀಪ ರಸ್ತೆ ಬದಿ ನಿಂತಿದ್ದ ಆನೆಗೆ ಕಬ್ಬಿನ ಕಂತೆಗಳನ್ನು ಎಸೆದಿದ್ದಾರೆ. ಇದನ್ನು ಕಂಡ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಪೂರ್ವಾಪರ ವಿಚಾರಿಸಿ ದಂಡ ಹಾಕಿದ್ದಾರೆ.
ದಂಡ ಕಟ್ಟುವ ತನಕ ಲಾರಿ ಬಿಡದಿದ್ದರಿಂದ ದಂಡ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಬ್ಬಿನ ರುಚಿಗಾಗಿ ಆನೆಗಳು ಆಗಾಗ್ಗೆ ಲಾರಿಗಳಿಗೆ ಅಡ್ಡ ಹಾಕಿ ಕಬ್ಬು ವಸೂಲಿ ಮಾಡುವುದು ಬೆಂಗಳೂರು ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಆಸನೂರು ಭಾಗದಲ್ಲಿ ಸಾಮಾನ್ಯವಾಗಿದ್ದು ಲಾರಿ ಚಾಲಕ ಓರ್ವನಿಗೆ ಈ ಪರಿ ದಂಡ ವಿಧಿಸಿರುವುದು ಆಕ್ರೋಶಕ್ಕೂ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka