ರೈಲಿನಲ್ಲಿ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ವಜ್ರ, ಚಿನ್ನಾಭರಣಗಳು ಕಳವು
ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರ ತಂಡವೊಂದು ದೋಚಿ ಪರಾರಿಯಾಗಿರುವ ಘಟನೆ ಡಿಸೆಂಬರ್ 6ರಂದು ಬೆಳಗಿನ ಜಾವ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೀಪಾ ರೈ(44) ತನ್ನ ಕುಟುಂಬದವರೊಂದಿಗೆ ಡಿಸೆಂಬರ್ ಐದರಂದು ಮುಂಬೈಯಿಂದ ಕಟಪಾಡಿ ಗೆ ರೈಲಿನಲ್ಲಿ ಹೊರಟಿದ್ದರು.
ಈ ವೇಳೆ ಅವರು ತನ್ನಲ್ಲಿದ್ದ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಿಗ್ಗೆ ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು. ಈ ವೇಳೆ ಕಳ್ಳರ ತಂಡ ಬ್ಯಾಗಿನಲ್ಲಿದ್ದ ಚಿನ್ನ ಆಭರಣಗಳನ್ನು ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ.
ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್ ನಲ್ಲಿಟ್ಟಿರುವ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾಗಿರುವ ಚಿನ್ನಾಭರಣಗಳು ಡೈಮಂಡ ಚಿನ್ನಾಭರಣಗಳ ಒಟ್ಟು ಮೌಲ್ಯ 40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka