‘ಹೇಯ್ ತಿ*** ಮುಚ್ಚು’ ಎಂದು ನಿಂದಿಸಿ ಅರೆ ಬೆತ್ತಲೆಯಾಗಿ ವಕೀಲನ ಬಂಧನ: ವಕೀಲರ ಸಂಘದಿಂದ ಪ್ರತಿಭಟನೆ
ಮಂಗಳೂರು: ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ಪ್ರತಿಭಟನೆ ನಡೆಸಲಾಯಿತು.
ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಪೊಲೀಸರ ದೌರ್ಜನ್ಯ ಆರೋಪ ಕೇಳಿ ಬಂದಿದೆ. ರಾತ್ರೋ ರಾತ್ರಿ ವಕೀಲನ ಮನೆಗೆ ಹೋದ ಪೊಲೀಸರು, ‘ಹೇಯ್ ತಿ*** ಮುಚ್ಚು’ ಎಂದು ಅವಾಚ್ಯವಾಗಿ ನಿಂದಿಸಿ, ಅರೆ ಬೆತ್ತಲೆಯಾಗಿ ಜೀಪಿಗೆ ಎಳೆದು ಹಾಕಿ ಬಂಧಿಸಿದ ಆರೋಪ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪಿಎಸ್ಸೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಕೀಲರು, ಜಾಗದ ವಿಚಾರದಲ್ಲಿ ಜಗಳದಲ್ಲಿ ಎಫ್ ಐಆರ್ ದಾಖಲಿಸಿ ನ್ಯಾಯವಾದಿ ಜೊತೆ ಕೆಟ್ಟದಾಗಿ ನಡೆದುಕೊಳ್ಳಲಾಗಿದೆ ಎಂದು ನ್ಯಾಯವಾದಿಗಳು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka