ಸಿ.ಟಿ.ರವಿ ಹೇಳಿಕೆ ಬಿಜೆಪಿಯನ್ನು ಬೆತ್ತಲೆಗೊಳಿಸಿದೆ: ರಮಾನಾಥ ರೈ ವಾಗ್ದಾಳಿ - Mahanayaka
10:32 PM Thursday 12 - December 2024

ಸಿ.ಟಿ.ರವಿ ಹೇಳಿಕೆ ಬಿಜೆಪಿಯನ್ನು ಬೆತ್ತಲೆಗೊಳಿಸಿದೆ: ರಮಾನಾಥ ರೈ ವಾಗ್ದಾಳಿ

ramanath rai
07/12/2022

ಬಿಜೆಪಿಗೆ ರೌಡಿ ಶೀಟರ್ ‌ಗಳನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಸಮರ್ಥಿಸಿಕೊಂಡು ಸಿ.ಟಿ.ರವಿ ನೀಡಿರುವ ಹೇಳಿಕೆ ಬಿಜೆಪಿಯನ್ನು ಬೆತ್ತಲುಗೊಳಿಸಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ.

ಮಲ್ಲಿಕಟ್ಟೆಯಲ್ಲಿರುವ  ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೌಡಿಶೀಟರ್ ಆಗಲು ಗಂಭೀರ ಅಪರಾಧ ಪ್ರಕರಣಗಳನ್ನು ಹೊಂದಿರಬೇಕಾಗುತ್ತದೆ. ಅಂತಹ ವ್ಯಕ್ತಿಗಳು ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ತಪ್ಪಲ್ಲ. ನಾನು ರೌಡಿಶೀಟರ್ ಆಗಿದ್ದವ. ರಾಜಕೀಯ ಕ್ಷೇತ್ರದಲ್ಲಿ ಇದೆಲ್ಲಾ ಸಾಮಾನ್ಯ ಎಂದು ಸಿ.ಟಿ.ರವಿ ಹೇಳುವ ಮೂಲಕ ಬಿಜೆಪಿಯಲ್ಲಿ ರೌಡಿಸಂ ಮಾಡುವವರಿಗೆ ಅವಕಾಶ ನೀಡಲಾಗುತ್ತೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಹಿಂದಿನಿಂದಲೂ ದ್ವೇಷದ ರಾಜಕಾರಣ ಮಾಡಿಕೊಂಡು ಬಂದಿದ್ದು, ಈ ದ್ವೇಷ ಹತ್ಯೆಗಳಿಗೂ ಕಾರಣವಾಗಿದೆ. ಹಿಂದೆಲ್ಲಾ ಕೋಮು ಸಂಘರ್ಷ ಸಂದರ್ಭ ಹತ್ಯೆಗಳು ನಡೆಯುತ್ತಿತ್ತು. ಆದರೆ ಇದೀಗ ಇಂತಹ ಹತ್ಯೆಗಳು ಸಾಮಾನ್ಯ ಎಂಬಂತೆ ಆಗಿದೆ. ಇಂತಹ ಹತ್ಯಾ ಪ್ರಕರಣಗಳ ಎಫ್‌ ಐಆರ್‌ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಸರಿಲ್ಲ ಎಂಬುದನ್ನು ನಾನು ಹೇಳಬಲ್ಲೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ