ಉಡುಪಿ: ವಕೀಲ ಕುಲದೀಪ್ ಶೆಟ್ಟಿ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರಿಂದ ಪ್ರತಿಭಟನೆ
ಉಡುಪಿ: ಮಂಗಳೂರಿನ ವಕೀಲ ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣೆ ಎಸ್ ಐ ಮತ್ತು ಇತರ ಪೊಲೀಸರು ಎಸಗಿದ ದೌರ್ಜನ್ಯ ಖಂಡಿಸಿ ಉಡುಪಿ ವಕೀಲರ ಸಂಘದ ನೇತೃತ್ವದಲ್ಲಿ ಇಂದು ಉಡುಪಿ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ವಕೀಲ ಕುಲದೀಪ್ ಶೆಟ್ಟಿ ಅವರನ್ನು ಅಮಾನುಷವಾಗಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸುವಾಗ ಯಾವುದೇ ಕಾನೂನು ಪಾಲಿಸಿಲ್ಲ. ಒಂದು ರೀತಿಯ ಸರ್ವಾಧಿಕಾರಿಗಳಂತೆ ಪೊಲೀಸರು ವರ್ತಿಸಿದ್ದಾರೆ. ಇದು ಖಂಡನೀಯ. ಪೂರ್ವಪರ ವಿಚಾರಣೆ ನಡೆಸದೆ ಏಕಾಏಕಿಯಾಗಿ ಬಂಧನ ಮಾಡಿರುವುದು ಅಕ್ಷಮ್ಯ ಅಪರಾಧ. ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಉಪಾಧ್ಯಕ್ಷ ದಿನೇಶ್ ಬಿ. ಶೆಟ್ಟಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಕಾರ್ಯದರ್ಶಿ ಶ್ರೀಧರ ಕಜೆ, ಹಿರಿಯ ವಕೀಲರಾದ ಮಟ್ಟಾರು ರತ್ನಾಕರ ಹೆಗ್ಡೆ, ಎ. ಸಂಜೀವ, ಪ್ರದೀಪ್ ರಾವ್, ಶಾಂತಾರಾಮ್ ಶೆಟ್ಟಿ, ಆನಂದ ಮಡಿವಾಳ ಮೊದಲಾದವರು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka