ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ವ್ಯಕ್ತಿಯ ದಾರುಣ ಸಾವು - Mahanayaka
9:02 AM Thursday 12 - December 2024

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ವ್ಯಕ್ತಿಯ ದಾರುಣ ಸಾವು

crime news
10/12/2022

ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕಟಪಾಡಿ ಏಣಗುಡ್ಡೆ ನಿವಾಸಿ ಸತೀಶ್ ಗುರುತಿಸಲಾಗಿದೆ. ಇವರು ಕಟಪಾಡಿ ಜಂಕ್ಷನ್‌ನಲ್ಲಿ ರಸ್ತೆ ದಾಟಲು ನಿಂತಿದ್ದ ಬೈಕ್ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಾಯಗೊಂಡ ಸತೀಶ್, ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

ಹಣದ ಆಡಚಣೆಯಿಂದ ಯುವಕ ಆತ್ಮಹತ್ಯೆ

ಮಣಿಪಾಲ: ಹಣದ ಅಡಚಣೆಯಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದ್ರಾಳಿಯಲ್ಲಿ ಡಿ.9ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ತಮ್ಮಣ್ಣ ಬೋರನಟ್ಟಿ(23) ಎಂದು ಗುರುತಿಸಲಾಗಿದೆ. ಇಂದ್ರಾಳಿಯ ಟಿ.ವಿಜಯ ಕುಮಾರ ಎಂಬವರ ಬಾಡಿಗೆ ಶೆಡ್ನಲ್ಲಿ ವಾಸವಾಗಿದ್ದ ಇವರು, ಹಣದ ಅಡಚಣೆ ಅಥವಾ ಇತರ ವೈಯಕ್ತಿಕ ಕಾರಣದಿಂದ ಶೆಡ್ಡಿನ ಮಾಡಿನ ಕಬ್ಬಿಣದ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ