ಮಧ್ಯರಾತ್ರಿ ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿಯರು: ಬಜರಂಗದಳ ದಾಳಿ
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ಹಿಂದೂ ಕಾರ್ಯಕರ್ತರು ತಡೆದು ಹಲ್ಲೆಗೆ ಯತ್ನಿಸಿದ್ದಾರೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿಯರನ್ನು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಜರಂಗ ದಳದ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಜೋಡಿ ಹೊಟೇಲ್ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದಾರೆ. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಂತರ ಆ ಜೋಡಿ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿ ಬಳಿಕ ಮನೆಗೆ ಕಳುಹಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka