ಕ್ಯಾಂಟರ್ ವಾಹನ ಡಿಕ್ಕಿ: ಪಾದಚಾರಿ ಮೃತ್ಯು - Mahanayaka
1:29 PM Thursday 12 - December 2024

ಕ್ಯಾಂಟರ್ ವಾಹನ ಡಿಕ್ಕಿ: ಪಾದಚಾರಿ ಮೃತ್ಯು

udupi news
13/12/2022

ಉಡುಪಿ: ನಿಟ್ಟೂರು ಬಾಳಿಗ ಫಿಶ್‌’ನೆಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.11ರಂದು ರಾತ್ರಿ 7:45 ಗಂಟೆಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬಾಳಿಗಾ ಫಿಶ್ನೆಟ್ನಲ್ಲಿ ಕೆಲಸ ಮಾಡುತ್ತಿದ್ದ ಹರೇಂದ್ರ ಮರಾಂಡಿ(53) ಮೃತ ದುದೈರ್ವಿ. ಅಂಬಾಗಿಲು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನ, ರಸ್ತೆ ದಾಟಲು ರಸ್ತೆಯ ಅಂಚಿನಲ್ಲಿ ನಿಂತಿದ್ದ ಹರೇಂದ್ರ ಮರಾಂಡಿಗೆ ಡಿಕ್ಕಿ ಹೊಡೆಯಿತು.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು, ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕರೆದು ಹೋಗುತ್ತಿದ್ದ ಮಾರ್ಗ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ