ಚಾಮರಾಜನಗರದಲ್ಲಿ ಸಿಎಂ: ಬಿ.ಎಸ್.ವೈ ಫೋಟೋ ಇಲ್ಲದ್ದಕ್ಕೆ ಅಭಿಮಾನಿಗಳ ಆಕ್ರೋಶ!
ಚಾಮರಾಜನಗರ: ಸಾವಿರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಇಂದು ಉದ್ಘಾಟನೆ, ಶಂಕುಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು ಈ ವೇಳೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು.
ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಇ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ ಅಭಿಮಾನಿಗಳು ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ ಹಾಕುವಂತೆ ಒತ್ತಾಯಿಸಿದರು. ಕೆಲಹೊತ್ತು ಇದು ಗೊಂದಲಕ್ಕೂ ಕಾರಣವಾಯಿತು.
ಬಳಿಕ, ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್ ವೇದಿಕೆ ಏರಿ ‘ಇದು ಸರ್ಕಾರದ ಕಾರ್ಯಕ್ರಮವಾದ್ದರಿಂದ ಯಡಿಯೂರಪ್ಪ ಅವರ ಫೋಟೋ ಹಾಕಲಾಗಿಲ್ಲ, ಅವರ ಬಗ್ಗೆ ಅಪಾರ ಗೌರವ-ಪ್ರೀತಿ ಇದೆ, ಅಭಿಮಾನಿಗಳು ಅಸಮಾಧಾನಗೊಳ್ಳಬಾರದು ಎಂದು ಮನವಿ ಮಾಡಿಕೊಂಡರು. ಇದಾದ ನಂತರ ಬಿಎಸ್ ವೈ ಅಭಿಮಾನಿಗಳು ಶಾಂತವಾದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka