ಆಟೋ—ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು
ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ.
ಕೊಕ್ರಾಡಿ– ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ. ವಿರುದ್ಧ ದಿಕ್ಕಿನಿಂದ ಬಂದ ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka