ಆ್ಯಂಬುಲೆನ್ಸ್ ನಲ್ಲಿ 14 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಾಟ! - Mahanayaka
4:31 PM Wednesday 11 - December 2024

ಆ್ಯಂಬುಲೆನ್ಸ್ ನಲ್ಲಿ 14 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಾಟ!

drugs
14/12/2022

ಅಸ್ಸಾಂ: ಆ್ಯಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದ 14 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ಗುವಾಹಟಿ ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು,  ಖಚಿತ ಮಾತಿಯೊಂದಿಗೆ ದಾಳಿ ನಡೆಸಿದ ಗುವಾಹಟಿ ಪೊಲೀಸರು, 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ಆ್ಯಂಬುಲೆನ್ಸ್ ನಿಂದ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

ಆ್ಯಂಬುಲೆನ್ಸ್ ಚಾಲಕ ಮಿರಾಜೌಲ್ ಇಸ್ಲಾಂ ಬಂಧಿತ ಆರೋಪಿಯಾಗಿದ್ದು,  ಮಣಿಪುರದಿಂದ ಬರುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂದು ಜಂಟಿ ಪೊಲೀಸ್ ಆಯುಕ್ತ ಪಾರ್ಥ ಸಾರಥಿ ಮಹಾಂತ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ