ಯಕ್ಷಗಾನ ಆಯೋಜಿಸಿದ್ದ ಸ್ಥಳದಲ್ಲಿ ಆತಂಕ ಸೃಷ್ಟಿಸಿದ ಮನೋರೋಗಿ
ಉಡುಪಿ: ಮೂಡುಪೆರಂಪಳ್ಳಿಯಲ್ಲಿ ಸೇವಾಕರ್ತರು ಹರಕೆ ಯಕ್ಷಗಾನ ಆಯೋಜಿಸಿದ್ದ ಸ್ಥಳದಲ್ಲಿ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವಶಕ್ಕೆ ಪಡೆದು, ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗ ಆಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಬುಧವಾರ ನಡೆದಿದೆ. ಸ್ಥಳಿಯ ಸಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.
ಮನೋರೋಗಿಯು ದಾಖಲು ಪ್ರಕ್ರಿಯೆ ನಡೆಸುವಾಗ ಹೆಸರು ಶಿವರಾಮ ನಾಯ್ಕ, (45) ತಂದೆ ನಾರಾಯಣ ನಾಯ್ಕ, ಸಾಗರದ ಶುಂಠಿಕೊಪ್ಪದ ಗ್ರಾಮದ ನಿವಾಸಿ ಎಂದು ಹೇಳಿಕೊಂಡಿದ್ದಾರೆ.
ಸಂಬಂಧಿಕರು ಉಡುಪಿಯ ಡಾ.ಎ.ವಿ.ಬಾಳಿಗ ಆಸ್ಪತ್ರೆಯನ್ನು ತುರ್ತಾಗಿ ಸಂಪರ್ಕಿಸಲು ಸೂಚಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka