ಮಾಜಿ ಅಧ್ಯಕ್ಷೆಯ ಪತಿಯ ಮೇಲೆ ಮಾರಣಾಂತಿಕ ಹಲ್ಲೆ
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರ ಪತಿಗೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ ಇಂದ್ರಾಳಿ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದರನ್ನು ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕೆ ಎಂಬವರ ಪತಿ ಕೃಷ್ಣ ನಾಯ್ಕೆ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾರೆ ಕೆಲಸ ಮಾಡುವ ಕೃಷ್ಣ ನಾಯ್ಕಾಗೆ ಆರೋಪಿ ಅರ್ಜುನ್ ಎಂಬಾತನನ್ನು ಮನೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ನಡೆಸಿದ್ದಾನೆ ಎಂದು ದೂರಲಾಗಿದೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka