ಲೈಂಗಿಕ ದೌರ್ಜನ್ಯದಿಂದ ಬಾಲಕಿ ಗರ್ಭಿಣಿ: ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದಾಗ ಸಂಗತಿ ಬೆಳಕಿಗೆ!! - Mahanayaka
1:15 PM Thursday 12 - December 2024

ಲೈಂಗಿಕ ದೌರ್ಜನ್ಯದಿಂದ ಬಾಲಕಿ ಗರ್ಭಿಣಿ: ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದಾಗ ಸಂಗತಿ ಬೆಳಕಿಗೆ!!

yalanduru police
16/12/2022

ಚಾಮರಾಜನಗರ: ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ ವೇಳೆ 16 ವರ್ಷ ಬಾಲಕಿ ಗರ್ಭಿಣಿಯಾಗಿದ್ದ ಸಂಗತಿ ಬೆಳಕಿಗೆ ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಯಳಂದೂರು ತಾಲೂಕಿನ ಕೋಳಿಫಾರ್ಮ್‌ವೊಂದರಲ್ಲಿ ಕುಟುಂಬದ ಜತೆಗೆ ವಾಸವಿದ್ದ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪರಿಣಾಮ ಈಗ ಆಕೆ 3  ತಿಂಗಳ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ.

ಬಾಲಕಿಗೆ ತೀವ್ರವಾದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ತಂದೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ತಪಾಸಣೆ ಸಮಯದಲ್ಲಿ ಈ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ.

ನಂತರ ಬಾಲಕಿಯನ್ನು ಚಾಮರಾಜನಗರ ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿ ಕುಟುಂಬದ ಜತೆಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ