ಡಿವೈಡರ್ ಗೆ ಬೈಕ್ ಡಿಕ್ಕಿ: ಮಣಿಪಾಲದ ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಾಯ
ಮಣಿಪಾಲ: ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಸಮೀಪ ಡಿ.16ರಂದು ನಸುಕಿನ ವೇಳೆ ನಡೆದಿದೆ.
ಮೃತರನ್ನು ಮಣಿಪಾಲ ಎಂಟೆಕ್ ವಿದ್ಯಾರ್ಥಿ, ಶಿವಮೊಗ್ಗದ ನಿಖಿಲ್(23) ಎಂದು ಗುರುತಿಸಲಾಗಿದೆ. ಬೈಕ್ ಸವಾರ ನಿಹಾಲ್ ಹಾಗೂ ಇನ್ನೊರ್ವ ಸಹಸವಾರ ಮಹೇಂದ್ರ ಜಿ. ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂವರು ಒಂದೇ ಬೈಕಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬೈಕ್, ನಿಂತ್ರಯಣ ತಪ್ಪಿದ ಬೈಕ್ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆಯಿತು. ಇದರಿಂದ ಮೂವರು ರಸ್ತೆಗೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ನಿಖಿಲ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw