ಹನಿಮೂನ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಪತಿ ಸಾವು, ಪತ್ನಿಯ ಸ್ಥಿತಿ ಗಂಭೀರ
ದಾವಣಗೆರೆ: ಹನಿಮೂನ್ ಗೆ ತೆರಳುತ್ತಿದ್ದ ನವದಂಪತಿಯ ಬೈಕ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಪತಿ ಮೃತಪಟ್ಟರೆ, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆಯ ಹಿರೇಕೆರೂರು ತಾಲೂಕಿನ ಕೊಡದ ಬಳಿಯಲ್ಲಿ ನಡೆದಿದೆ.
ಸಂಜಯ್(28) ಮೃತಪಟ್ಟವರಾಗಿದ್ದು, ಇವರ ಪತ್ನಿ ಪ್ರೀತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರಿಗೆ ಮದುವೆಯಾಗಿ ಕೇವಲ 15 ದಿನಗಳಾಗಿದ್ದವು.
ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ, ದೇವರ ದರ್ಶನ ಪಡೆದು ಊರಿಗೆ ಮರಳುತ್ತಿದ್ದ ವೇಳೆ ನಿಂತಿದ್ದ ಕಬ್ಬಿನ ಟ್ರಕ್ ಗೆ ದಂಪತಿ ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಸಂಜಯ್ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದು, ಪ್ರೀತಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka