ಒಂದೇ ವೇಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಜೋಡಿ
ಚಿಕ್ಕಮಗಳೂರು : ಒಂದೇ ವೇಲ್ ನಲ್ಲಿ ಯುವಕ-ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ.
ಜೋಡಿಯು ವೆಲ್ ನ ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದು, ಇವರಿಬ್ಬರು ಪ್ರೇಮಿಗಳಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw