ಕಂದಕ್ಕೆ ಉರುಳಿದ ಕಾರು: 8 ಅಯ್ಯಪ್ಪ ಭಕ್ತರ ದುರ್ಮರಣ: ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು: ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ 8 ಭಕ್ತರು ಮೃತಪಟ್ಟಿರುವ ಘಟನೆ ಕೇರಳ ತಮಿಳುನಾಡು ಗಡಿಯಲ್ಲಿರುವ ಥೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಥೇಣೀ—ಅಂಡಿಪೆಟ್ಟಿ ನಿವಾಸಿಗಳಾಗಿದ್ದರು ಎಂದು ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾರೆ. ಘಟನೆ ನಡೆದ ವೇಳೆ ಕಾರಿನಲ್ಲಿ 10 ಜನರು ಇದ್ದರು ಎಂದು ಅವರು ತಿಳಿಸಿದ್ದಾರೆ.
ಅಪಘಾತದ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಟ್ಟವಾಗಿ ಮಂಜು ಮುಸುಕಿದರಿಂದಾಗಿ ರಸ್ತೆ ಸರಿಯಾಗಿ ಕಾಣದ ಪರಿಣಾಮ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಕುಮಿಲಿ ಪರ್ವತ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಅಯ್ಯಪ್ಪ ದರ್ಶನಕ್ಕಾಗಿ ಹೊರಟಿದ್ದ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw