ಚಿಕ್ಕಮಗಳೂರಿನಲ್ಲಿ ಕಾಡಾನೆಗೆ ಮತ್ತೋರ್ವ ರೈತ ಬಲಿ - Mahanayaka
11:00 PM Wednesday 11 - December 2024

ಚಿಕ್ಕಮಗಳೂರಿನಲ್ಲಿ ಕಾಡಾನೆಗೆ ಮತ್ತೋರ್ವ ರೈತ ಬಲಿ

chikkamagaluru
25/12/2022

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಮೂರು ಪುಂಡಾನೆಗಳನ್ನು  ಸ್ಥಳಾಂತರ ನಡೆಸಿದರೂ ಇದೀಗ ಮತ್ತೊಂದು ಕಾಡಾನೆ ಪುಂಡಾಟ ಮೆರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಕೊಂದು ಹಾಕಿದೆ.

ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ನಡೆಸಿದ ಆನೆ ಹತ್ಯೆ ಮಾಡಿದೆ. ಈರಪ್ಪ ಎಂಬ ರೈತ ಕಾಡಾನೆ ದಾಳಿಯಿಂದ ಮೃತಪಟ್ಟ ರೈತನಾಗಿದ್ದಾನೆ.

ಇತ್ತೀಚೆಗಷ್ಟೇ ಮೂರು ಕಾಡಾನೆಗಳನ್ನು ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಇದೀಗ ತರೀಕೆರೆ ತಾಲೂಕಿನಲ್ಲಿ ರೈತನೋರ್ವನನ್ನು ಆನೆ ಬಲಿಪಡೆದಿದ್ದು, ಜನರು ಆತಂಕ್ಕೀಡಾಗಿದ್ದಾರೆ.

ಕಾಡಾನೆಗಳು ನಾಡಿಗೆ ಬಾರದಂತೆ ಸರ್ಕಾರ ತಡೆಯಲು ಕ್ರಮಕೈಗೊಳ್ಳಬೇಕು ಅನ್ನೋದು ಇಲ್ಲಿನ ನಿವಾಸಿಗಳ ಒತ್ತಾಯವಾಗಿದೆ. ಕಾಡಾನೆ ದಾಳಿ ಹಿನ್ನೆಲೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ