ಮನೆಗೆ ತಲುಪಿದ ಜಲೀಲ್ ಮೃತದೇಹ: ಸಾರ್ವಜನಿಕರಿಂದ ಅಂತಿಮ ದರ್ಶನ
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಜಲೀಲ್ ಅವರ ಮೃತದೇಹ ಮನೆಗೆ ತಲುಪಿದ್ದು, ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಕೃಷ್ಣಾಪುರ 9ನೇ ಬ್ಲಾಕ್ ನಲ್ಲಿರವ ಜಲೀಲ್ ಅವರ ಮನೆಗೆ ರವಾನೆ ಮಾಡಲಾಗಿದೆ.
ಅಂತಿಮ ವಿಧಿವಿಧಾನದ ಬಳಿಕ ಅಂತ್ಯ ಸಂಸ್ಕಾರವು ಕೂಳೂರು ಪಂಜಿಮೊಗರಿನ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಜಲೀಲ್ ಮನೆ ಪರಿಸರದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಮೃತದೇಹವನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಮೃತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಕಳೆದ ರಾತ್ರಿ ಕೃಷ್ಣಾಪುರ 4 ನೇ ಬ್ಲಾಕ್ ನೈತಂಗಡಿ ಬಳಿ ದುಷ್ಕರ್ಮಿಗಳಿಂದ ಜಲೀಲ್ ಹತ್ಯೆಯಾಗಿದ್ದರು. ಘಟನೆ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುನ್ನೆಚ್ಚರಿಕೆ ಕ್ರಮವಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw