ಜಲೀಲ್ ಮೃತದೇಹ ಇದ್ದ ಆ್ಯಂಬುಲೆನ್ಸ್ ತಡೆದು ಪ್ರತಿಭಟನೆ: ಆರೋಪಿಗಳ ಬಂಧನಕ್ಕೆ ಒತ್ತಾಯ
ಮಂಗಳೂರು: ನಿನ್ನೆ ರಾತ್ರಿ ಕೊಲೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರು ಸ್ಥಳದಲ್ಲೇ ಧರಣಿ ನಡೆಸಿದರು.
ಇಂದು ಮಧ್ಯಾಹ್ನ ವೇಳೆ 9ನೇ ಬ್ಲಾಕ್ ಜುಮಾ ಮಸೀದಿಯಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿದ ಬಳಿಕ ನೆರೆದಿದ್ದ ಸಾವಿರಾರು ಮಂದಿ ಜಲೀಲ್ ಅವರ ಮೃತದೇಹವನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಅನ್ನು ನಿಲ್ಲಿಸಿ ಧರಣಿ ಆರಂಭಿಸಿದ್ದು, ಆರೋಪಿಗಳ ಬಂಧನವಾಗದೇ ಅಂತ್ಯ ಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡುಬಂದಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ, ಮಾಜಿ ಮೇಯರ್ ಅಶ್ರಫ್ ಮತ್ತಿತರ ಮುಖಂಡರು ಆಗಮಿಸಿದ್ದು, ಆಕ್ರೋಶಿತ ಜನರನ್ನು ಸಮಾಧಾನಪಡಿಸಲು ಹರಸಾಹಸ ಪಡುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಧರಣಿನಿರತರು ಒತ್ತಾಯಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw