ಜಲೀಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಬಂಧನ: ಶೈಲೇಶ್, ಮುನ್ನ, ಪವನ್ ಬಂಧಿತ ಆರೋಪಿಗಳು
ಮಂಗಳೂರಿನ ಕೃಷ್ಣಾಪುರದಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು.
ಹತ್ಯೆಗೀಡಾದ ಜಲೀಲ್
ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಸದ್ಯದ ವಿಚಾರಣೆಯಲ್ಲಿ ಬಂಧಿತ ಮೂವರು ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಯಾವ ಕಾರಣಕ್ಕೆ ಈ ಕೊಲೆ ಮಾಡಲಾಗಿದೆ, ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದರು.
ಬಂಧಿತರ ಪೈಕಿ ಇಬ್ಬರ ವಿರುದ್ಧ ಸುರತ್ಕಲ್ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಇವರು ಭಾಗಿಯಾಗಿರುವುದು ತಿಳಿದುಬಂದಿದೆ. ಜಲೀಲ್ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಬಂಧನಕ್ಕೆ ಕ್ರಮ ಕೈಕೊಳ್ಳಲಾಗುವುದು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯರು ಸೇರಿದಂತೆ ಸುಮಾರು 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka